ಗ್ರಾ.ಪಂ ಉಪ ಚುನಾವಣೆಯ ಮತದಾನ

ಬೆಂಗಳೂರು: ಜ.2 ರಂದು ರಾಜ್ಯದ ವಿವಿಧ ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ನಡೆಯಲಿರುವ ಉಪ ಚುನಾವಣೆಯ ಮತದಾನ ದಿನದಂದು ಅರ್ಹ ಮತದಾರ ಕಾರ್ಮಿಕರಿಗೆ ವೇತನ ಸಹಿತ ರಜೆಯನ್ನು ಘೋಷಿಸಿ ಕಾರ್ಮಿಕ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಚುನಾವಣೆ
election, voting

ರಾಜ್ಯದ ವಿವಿಧ ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ನಡೆಯಲಿರುವ ಉಪ ಚುನಾವಣೆಯ ಮತದಾನ ದಿನದಂದು ಆಯಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವಂತೆ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ, (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡಂತೆ ಜನವರಿ 2 ರಂದು ಸಾರ್ವತ್ರಿಕ ರಜೆಯನ್ನು ಘೋಷಿಸಿದೆ.

ತುರ್ತು ಸೇವೆಗಳಿಗೆ ಈ ರಜೆಯು ಅನ್ವಯಿಸುವುದಿಲ್ಲ ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರುಗಳು ಚುನಾವಣಾ ಕಾರ್ಯಕ್ಕೆ ಹಾಜರಾಗತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯದಲ್ಲಿ ವಿವಿಧ ಕಾರಣದಿಂದ ಖಾಲಿಯಾದ 03 ತಾಲ್ಲೂಕು ಪಂಚಾಯತಿಯ 03 ತಾಲ್ಲೂಕು ಪಂಚಾಯತ್ ಕ್ಷೇತ್ರಗಳಿಗೆ ಹಾಗೂ 29 ಜಿಲ್ಲೆಗಳ 240 ಗ್ರಾಮ ಪಂಚಾಯಿತಿಗಳ 330 ಸ್ಥಾನಗಳಿಗೆ ಉಪ ಚುನಾವಣೆ ಮತ್ತು ಅವಧಿ ಮೀರಿ ಮುಕ್ತಾಯಗೊಂಡ 04 ತಾಲ್ಲೂಕುಗಳ 8 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆಯನ್ನು ದಿನಾಂಕ: 02-01-2019 ರಂದು ನಿಗದಿಪಡಿಸಿ ರಾಜ್ಯ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿರುತ್ತದೆ.

ತಾಜಾ ಸುದ್ದಿಗಾಗಿ ePatrike ಆ್ಯಪ್‍ ಅನ್ನು ಡೌನ್‍ಲೋಡ್‍ ಮಾಡಿ. ಸುದ್ದಿ ಅಪ್‍ಡೇಟ್ಸ್ ಗಾಗಿ ePathrike facebook ಪುಟ ಲೈಕ್‍ ಮಾಡಿ.
Loading...