hdk dares ಬಿಜೆಪಿ, ಎಚ್ಡಿಕೆ ನಡುವೆ ಜೋರು ಪಡೆದ ಸಿಡಿ ವಾರ್, ಬಿಜೆಪಿ ನಾಯಕರಿಗೆ ಎಚ್ಡಿಕೆ ತಿರುಗೇಟು

hdk dares
former cm kumaraswamy

hdk dares ಬಿಜೆಪಿಗರ ಟೀಕೆಗೆ ಎಚ್ಡಿಕೆ ಪ್ರತಿಟೀಕೆ, ಇದು ಕಟ್-ಪೇಸ್ಟ್ ಸರಕಾರ ಎಂದ ಮಾಜಿ ಸಿಎಂ

ಬೆಂಗಳೂರು: ಮಂಗಳೂರು ಗಲಭೆಗೆ ಸಂಬಮಧಿಸಿದಂತೆ ( hdk dares ) ಮಾಜಿ ಸಿಎಂ ಕುಮಾರಸ್ವಾಂಇ ಕೆಲವು ಸಿಡಿ ಬಿಡುಗಡೆ ಮಾಡಿದ ಬೆನ್ನಲ್ಲಿಯೇ ಅವರು ಮತ್ತು ಬಿಜೆಪ ನಾಯಕರ ನಡವೆ ಸಿಡಿ ವಾರ್‍ ಸ್ಫೋಟಗೊಂಡಿದೆ. ಸಿಡಿ ಬಿಡುಗಡೆಗೆ ಬಿಜೆಪಿಗರು ತಮ್ಮ ಮೇಲೆ ಮುಗಿಬಿದ್ದಿದ್ದಕ್ಕೆ ಎಚ್ಡಿಕೆ ಅಷ್ಟೇ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಮಂತ್ರಿಗಿರಿ ಮರೀಚಿಕೆ: ಗೆದ್ದ ಅನರ್ಹರ ಚಡಪಡಿಕೆ

ಸಿಡಿ ಬಿಡುಗಡೆ ಸಂಬಮಧ ತಮ್ಮ ವಿರುದ್ಧ ಟೀಕಾಸ್ತ್ರ ಪ್ರಯೋಗ ಮಾಡಿದ್ದ ಸಿಎಂ ಯಡಿಯೂರಪ್ಪ, ಸಚಿವರಾದ ಬಸವರಾಜ ಬೊಮ್ಮಾಯಿ, ಲಕ್ಷ್ಮಣ ಸವದಿ, ಕೇಂದ್ರ ಸಚಿವ ಸದಾನಮದ ಗೌಡ ಮತ್ತು ಸಂಸದೆ ಶೋಭಾ ಕರಾಂದ್ಲಾಜೆ ಅವರನ್ನು ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಕುಟುಕಿದ್ದಾರೆ.

ಸಿ.ಡಿ.ಯ ಸತ್ಯಾಸತ್ಯತೆ ಬಗ್ಗೆ ತಜ್ಞರಿಂದ ವರದಿ ತರಿಸಿ ಕೊಳ್ಳುವ ಧೈರ್ಯ ನಿಮಗಿದೆಯೇ? ಅದಕ್ಕೂ ಮಿಗಿಲಾಗಿ ನಿಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ. ನಾನು ಬಿಡುಗಡೆ ಮಾಡಿರುವ ‘ಸಿಡಿ’ಯನ್ನು ನೀವು ಸೃಷ್ಟಿಸಿಕೊಂಡಂತೆ ‘ಕಟ್ ಅಂಡ್ ಪೇಸ್ಟ್’ ಬಿಜೆಪಿ ಸರ್ಕಾರ ಎಂದುಕೊಂಡಿರಾ ಎಂದು ಬಿಎಸ್ವೈರನ್ನು ತಿವಿದಿದ್ದಾರೆ.

ಉಪ ಚುನಾವಣೆಯಲ್ಲಿ ಸೋತ ಹತಾಶೆಯಿಂದ ಸ್ಥಿಮಿತ ಕಳೆದುಕೊಂಡು ಈ ವಿಡಿಯೊ ಬಿಡುಗಡೆ ಮಾಡಿದ್ದಾರೆ ಎಂದು ಡಿಸಿಎಂ ಲಕ್ಮಣ ಸವದಿ ಆರೋಪಿಸಿದ್ದಾರೆ. ಹಾಗಾದರೆ ಸವದಿ ಅದ್ಯಾವ ಸ್ಥಿಮಿತ ಕಳೆದುಕೊಂಡು ಸದನದಲ್ಲಿ ನೀಲಿ ಚಿತ್ರ ನೋಡಿದರು ಎಂದು ಎಚ್ಡಿಕೆ ಪ್ರಶ್ನೆ ಮಾಡಿದ್ದಾರೆ.

.ಸಿಡಿ ಹಲವರಿಗೆ ರಾಜಕೀಯ ಅಸ್ತಿತ್ವದ ಸ್ವತ್ತು ಎಂದು ಸದಾನಂದಗೌಡ ವ್ಯಂಗ್ಯವಾಡಿದ್ದಾರೆ. ಬಿಜೆಪಿಯಲ್ಲಿ ಸದ್ದು ಮಾಡಿದ ಸಿಡಿಗಳ ಸಂಖ್ಯೆ ಒಂದೆರಡೇ? ಎಲ್ಲ ಸಿಡಿಗಳು ಬಯಲಾದರೆ ಬಿಜೆಪಿಗರು ಬೆತ್ತಲಾಗುತ್ತಾರಷ್ಟೇ. ಸಿಡಿಗಳು ಬಿಜೆಪಿಯ ಸ್ವತ್ತು. ಸಿಡಿ ಬಗ್ಗೆ ಮಾತಾಡುವಾಗ ಎಚ್ಚರದಿಂದಿರಿ ಎಂದಿದ್ದಾರೆ.

ಮಂಗಳೂರಿನಲ್ಲಿ ನಾನು ರಾಜಕಾರಣ ಮಾಡಬಾರದು ಎಂದು ಶೋಭಾ ಹೇಳಿದ್ದಾರೆ. ರಾಜಕೀಯ ಪಕ್ಷವೊಂದರ ಶಾಸಕಾಂಗ ಪಕ್ಷದ ನಾಯಕನಾದ ನಾನು ಮಂಗಳೂರಲ್ಲಿ ಏಕೆ ರಾಜಕಾರಣ ಮಾಡಬಾರದು? ಹಾಗೇನಾದರೂ ನಿರ್ಬಂಧವಿದೆಯೇ? ಮಂಗಳೂರಲ್ಲಿ ರಾಜಕಾರಣ ಮಾಡುತ್ತೇನೆ. ಆದರೆ ಬಿಜೆಪಿಯಂತಲ್ಲ. ಸಾತ್ವಿಕವಾಗಿ‌ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ePatrike ಆ್ಯಪ್‍ ಅನ್ನು ಡೌನ್‍ಲೋಡ್‍ ಮಾಡಿ. ಸುದ್ದಿ ಅಪ್‍ಡೇಟ್ಸ್ ಗಾಗಿ ePathrike facebook ಪುಟ ಲೈಕ್‍ ಮಾಡಿ.
Loading...