hdk demands ಮಂಗಳೂರು ಗಲಭೆಯಲ್ಲಿ ಪೊಲೀಸರ ದೌರ್ಜನ್ಯ: ಸದನ ಸಮಿತಿ ತನಿಖೆಗೆ ಎಚ್ಡಿಕೆ ಆಗ್ರಹ

hdk demands

hdk demands ಮಂಗಳೂರು ಗಲಭೆ ಕುರಿತು ಸಿಡಿ ಬಿಡುಗಡೆ ಮಾಡಿದ ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಸಿಎಎ ವಿರುದ್ಧದ ಪ್ರತಿಭಟನೆ ವೇಳೆ ನಡೆದ ( hdk demands ) ಮಂಗಳೂರು ಗಲಭೆಗೆ ಪೊಲಿಸರೇ ಕಾರಣ ಎಂದು ಆರೋಪಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು ಪ್ರಕರಣದ ತನಿಖೆಗೆ ಸದನ ಸಮಿತಿ ರಚಿಸುವಂತೆ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ಸಂಪುಟದಿಂದ 5 ಸಚಿವರಿಗೆ ಕೊಕ್, ಎಲ್ಲ ಪಕ್ಷಾಂತರಿಗಳಿಗೂ ಮಣೆ

ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಆಯುಕ್ತ ಹಾಗೂ ಇತರೆ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಿ ತನಿಖೆ ನಡೆಸಲು ಸದನ ಸಮಿತಿಗೆ ವಹಿಸಬೇಕು ಎಂದು ಕುಮಾರಸ್ವಾಮಿ ಶುಕ್ರವಾರ ಬೆಂಗಳೂರಿನಲ್ಲಿ ಆಗ್ರಹ ಪಡಿಸಿದರು.

ಮ್ಯಾಜಿಸ್ಟ್ರೇಟ್ ತನಿಖೆಯಿಂದ ಪ್ರಕರಣದ ಸತ್ಯಾಂಶ ಹೊರಬರುವುದಿಲ್ಲ. ಕಮಿಷನರ್‌ ಅನುಮತಿಗೂ ಮೊದಲೇ ಪೊಲೀಸರು ಗೋಲಿಬಾರ್‌ಗೆ ಸಿದ್ಧತೆ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ. ಕಮಿಷನರ್ ಮಾತಿಗೆ ಹಾಗಾದ್ರೆ ಬೆಲೆ‌ ಇಲ್ಲವೇ ಎಂದು ಕುಮಾರಸ್ವಾಮಿ ಕೇಳಿದ್ದಾರೆ.

ಈ ಸಂಬಂಧ ಅವರು ಸಿಡಿಯೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಪ್ರತಿಭಟನಾಕಾರರಿಗಿಂತ ಪೊಲಿಸರೇ ದೌರ್ಜನ್ಯವನ್ನು ಸೆರೆಹಿಡಿಯಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಆಯುಕ್ತರನ್ನು ಕೂಡಲೇ ಅಮಾನತುಗೊಳಸಿಬೇಕು ಎಂಬುದು ಅವರ ಆಗ್ರಹವಾಗಿದೆ.

ತಾಜಾ ಸುದ್ದಿಗಾಗಿ ePatrike ಆ್ಯಪ್‍ ಅನ್ನು ಡೌನ್‍ಲೋಡ್‍ ಮಾಡಿ. ಸುದ್ದಿ ಅಪ್‍ಡೇಟ್ಸ್ ಗಾಗಿ ePathrike facebook ಪುಟ ಲೈಕ್‍ ಮಾಡಿ.
Loading...