jds ready ಮಧ್ಯಂತರ ಚುನಾವಣೆಗೆ ನಾವ್ ರೆಡಿ: ಕುಮಾರಸ್ವಾಮಿ ಹೊಸ ಬಾಂಬ್

jds ready
kumaraswamy gives details of operation kamala

jds ready ಬಿಜೆಪಿಯ ಅನೈತಿಕ ರಾಜಕಾರಣದ ಫಲ ಉಪಚುನಾವಣೆ ಎಂದ ಎಚ್ಡಿಕೆ

ಚಿಕ್ಕಬಳ್ಳಾಪುರ: ಉಪ ಚುನಾವಣೆಯ ಬಳಿಕ ರಾಜ್ಯದಲ್ಲಿ ಮಧ್ಯಂತರ ( jds ready ) ಚುನಾವಣೆ ಎದುರಾದರೆ ಅದನ್ನೂ ಎದುರಿಸಲು ಜೆಡಿಎಸ್ ಪಕ್ಷ ಸಿದ್ದವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಇದನ್ನೂ ಓದಿ: ಅಲ್ಪಮತದ ಸರಕಾರ: ವರ್ಷದಲ್ಲಿ ಎರಡು ಬಾರಿ ಬಿಜೆಪಿಗೆ ಮುಖಭಂಗ

ಚಿಕ್ಕಬಳ್ಳಾಪುರದಲ್ಲಿ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ಅವರ ಪರ ಚುನಾವಣಾ ಪ್ರಚಾರ ನಡೆಸಿದ ಕುಮಾರಸ್ವಾಮಿ ಅವರು ಉಪ ಚುನಾವಣೆ ಫಲಿತಾಂಶ ಬರುವವರೆಗೂ ಏನು ಹೇಳಕ್ಕೆ ಆಗುವುದಿಲ್ಲ, ಆದರೆ ಒಂದು ವೇಳೆ ಮಧ್ಯಂತರ ಚುನಾವಣೆ ಎದುರಾದರೆ ಅದನ್ನು ಎದುರಿಸಲು ನಾವು ಸಿದ್ದರಿದ್ದೇವೆ ಎಂದರು

ಅನರ್ಹ ಶಾಸಕ ಸುಧಾಕರ್ ನನ್ನ ಮೇಲೆ ಎಷ್ಟೇ ಆರೋಪ ಮಾಡಿದರೂ ಕ್ಷೇತ್ರದ ಜನರಲ್ಲಿ ನನ್ನ ಮೇಲೆ ಇರುವ ವಿಶ್ವಾಸವನ್ನು ಕಿತ್ತುಕೊಳ್ಳುಲು ಸಾಧ್ಯವಿಲ್ಲ ಎಂದರು. ಉಪ ಚುನಾವಣೆ ಅಕಸ್ಮಿಕವಾಗಿ ಬಂದಿಲ್ಲ. ಬಿಜೆಪಿ ನಡೆಸಿದ ಅನೈತಿಕ ರಾಜಕಾರಣದಿಂದ ಬಂದಿದೆ ಎಂದು ಕುಮಾರಸ್ವಾಮಿ ಛೇಡಿಸಿದರು.

14 ತಿಂಗಳು ರಾಜ್ಯದ ಮುಖ್ಯಮಂತ್ರಿಯಾಗಿ ಒಂದು ದಿನವು ಸಂತೋಷವಾಗಿರಲಿಲ್ಲ. ಆರಂಭದಿಂದ ನನ್ನನ್ನು ಕೆಳಗಿಳಿಸುವ ಪ್ರಯತ್ನ ನಡೆಸಿದರು. ಆದರೆ ರೈತರ ಸಾಲ ಮನ್ನಾ ಮಾಡುವ ಉದ್ದೇಶದಿಂದ ಎಲ್ಲವನ್ನು ಸಹಿಸಿಕೊಂಡು ಬಂದೆ ಎಂದರು.

ಅಧಿಕಾರ ನಶ್ವರ, ಆದರೆ ಬಿಜೆಪಿಯವರು ಪ್ರತಿ ಬಾರಿಯು ಕೂಡ ಅಧಿಕಾರಕ್ಕೆ ಬರುವ ಸಲುವಾಗಿ ಕುರಿ, ಮೇಕೆ, ಆಡುಗಳನ್ನು ಖರೀದಿಸುವ ರೀತಿಯಲ್ಲಿ ಶಾಸಕರನ್ನು ಖರೀದಿ ಮಾಡಿದರು. ಇದು ಯಡಿಯೂರಪ್ಪ ಚಾಳಿ ಎಂದು ಎಚ್ಡಿಕೆ ಟೀಕಿಸಿದರು.

ಇದೇ ವೇಳೆ ಮೈತ್ರಿ ಸರ್ಕಾರ ಬೀಳಲು ಅನರ್ಹ ಶಾಸಕ ಸುಧಾಕರ್ ಪ್ರಮುಖ ಕಾರಣ. ಇಂತಹ ಹಣದ ಅಹಂ ಇರುವ ವ್ಯಕ್ತಿಯನ್ನು ತಿರಸ್ಕಾರ ಮಾಡಬೇಕೆಂದು ಕುಮಾರಸ್ವಾಮಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು.

ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಅನುಕೂಲ ಮಾಡಲು ಜೆಡಿಎಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಕೊನೆ ಕ್ಷಣದಲ್ಲಿ ಬದಲಾವಣೆ ಮಾಡಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಲಿದೆ ಎಂದರು.

ತಾಜಾ ಸುದ್ದಿಗಾಗಿ ePatrike ಆ್ಯಪ್‍ ಅನ್ನು ಡೌನ್‍ಲೋಡ್‍ ಮಾಡಿ. ಸುದ್ದಿ ಅಪ್‍ಡೇಟ್ಸ್ ಗಾಗಿ ePathrike facebook ಪುಟ ಲೈಕ್‍ ಮಾಡಿ.
Loading...