kashmir placard ಫ್ರೀ ಕಾಶ್ಮೀರ ನಾಮಫಲಕ: ವರದಿ ಕೇಳಿದ ವಾಲಾ, ಎಫ್‌ಐಆರ್‍ ದಾಖಲು

kashmir placard

kashmir placard ಮೈಸೂರು ವಿವಿಯಿಂದ ವರದಿ ಕೋರಿದ ರಾಜ್ಯಪಾಲ ವಾಲಾ

ಬೆಂಗಳೂರು: ಮೈಸೂರು ವಿವಿಯಲ್ಲಿ ಪ್ರತಿಭಟನೆ ವೇಳೆ ಫ್ರೀ ಕಾಶ್ಮೀರ ( kashmir placard ) ಎಂಬ ನಾಮಫಲಕ ಪ್ರದರ್ಶನಗೊಂಡ ಸಂಬಂಧ ವರದಿ ನೀಡುವಂತೆ ರಾಜ್ಯಪಾಲ ವಜುಭಾಯಿ ವಾಲಾ ಅವರು ವಿಶ್ವವಿದ್ಯಾಲಯದ ಕುಲಪತಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಮಾತು ತಪ್ಪಿದ ಕಾರಣ ಆನೆಗೊಂದಿ ಉತ್ಸವದಿಂದ ಬಿಎಸ್ವೈ ಗೈರು

ಈ ಮಧ್ಯೆ ಫ್ರೀ ಕಾಶ್ಮಿರ ನಾಮಫಲಕ ಪ್ರದರ್ಶನ ಮಾಡಿದ ಸಂಬಂದ ಮೈಸೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಎಫ್‌ಐಆರ್ ಹಾಕಿದ್ದಾರೆ. ಜೆಎನ್‌ಯು ಕ್ಯಾಂಪಸ್‌ನಲ್ಲಿ ಗಲಭೆ ಖಂಡಿಸಿ ಮೈಸೂರು ವಿವಿಯಲ್ಲಿ ಬುಧವಾರ ಪ್ರತಿಭಟನೆ ವೇಳೆ ಕೆಲವರು ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶಿಸಿದ್ದರು.

ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘ, ದಲಿತ ವಿದ್ಯಾರ್ಥಿಗಳ ಒಕ್ಕೂಟ, ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ ಬಹುಜನ ವಿದ್ಯಾರ್ಥಿ ಸಂಘದಿಂದ ಈ ಪ್ರತಿಭಟನಾ ಮೆರವಣಿಗೆ ನಡೆದಿತ್ತು.

ಈ ಕುರಿತು ಮೊಕದ್ದಮೆ ದಾಖಲಿಸಿಕೊಂಡಿರುವ ಪೊಲೀಸರು, ಪ್ರತಿಭಟನೆಯ ಆಯೋಜಕರನ್ನು ಆರೋಪಿಯನ್ನಾಗಿಸಿದ್ದಾರೆ. ಪ್ರತಿಭಟನೆಗೆ ಕರೆ ಕೊಟ್ಟಿದ್ದವರ ಮೇಲೆ ದೂರು ದಾಖಲಾಗಿದೆ. ಜೊತೆಗೆ ಪ್ರತಿಭಟನೆಯಲ್ಲಿ ಭಾಗಿಯಾದವರ ಗುರುತು ಪತ್ತೆಗೆ ತನಿಖೆ ಆರಂಭಿಸಲಾಗಿದೆ.

ಪ್ರತಿಭಟನೆಗೆ ಪೊಲೀಸರಿಂದ ಯಾವುದೇ ಅನುಮತಿ ಪಡೆದಿರಲಿಲ್ಲ. ಈ ಕುರಿತು ವಿಶ್ವವಿದ್ಯಾಲಯದ ಉಪಕುಲಪತಿಗಳಿಂದ ಮಾಹಿತಿ ಪಡೆಯಲಾಗುತ್ತಿದ್ದು, ತನಿಖೆ ಮುಂದುವರೆದಿದೆ ಎಂದು ಪೋಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ePatrike ಆ್ಯಪ್‍ ಅನ್ನು ಡೌನ್‍ಲೋಡ್‍ ಮಾಡಿ. ಸುದ್ದಿ ಅಪ್‍ಡೇಟ್ಸ್ ಗಾಗಿ ePathrike facebook ಪುಟ ಲೈಕ್‍ ಮಾಡಿ.
Loading...