odeya ದರ್ಶನ್ ‘ಒಡೆಯ’ ಚಿತ್ರೀಕರಣ ಫಿನಿಶ್, ಡಿಸೆಂಬರ್‌ನಲ್ಲಿ ತೆರೆಗೆ

odeya
odeya team in swiss

odeya ಸ್ವಿಜರ್‌ಲೆಂಡ್‌ನಲ್ಲಿ ರೊಮ್ಯಾಂಟಿಕ್ ಹಾಡುಗಳ ಚಿತ್ರೀಕರಣ ಮುಕ್ತಾಯ

ಬೆಂಗಳೂರು: ಕುರುಕ್ಷೇತ್ರ ಯಶಸ್ಸಿನ ಸಂಭ್ರಮದಲ್ಲಿರುವ ( odeya) ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ‘ಒಡೆಯ‘ ಚಿತ್ರದ ಎರಡು ಹಾಡುಗಳ ಚಿತ್ರೀಕರಣ ಸ್ವಿಜರ್‍‍ಲೆಂಡಿನಲ್ಲಿ ಭರದಿಂದ ಸಾಗಿದೆ.

ಇದನ್ನೂ ಓದಿ: ಶತದಿನದತ್ತ ಸೂಪರ್‌ಹಿಟ್ ದರ್ಶನ್ ಕುರುಕ್ಷೇತ್ರ ದಾಪುಗಾಲು

ದರ್ಶನ್ ಹಾಗೂ ರಾಘವಿ ತಿಮ್ಮಯ್ಯ ಅಭಿನಯಿಸಿದ ಈ ಹಾಡುಗಳನ್ನು ಜಿಮಿಜಿಪ್ ಹಾಗೂ ಎರಡು ಕ್ಯಾಮೆರಾಗಳನ್ನು ಬಳಸಿ ಅದ್ದೂರಿಯಾಗಿ ಚಿತ್ರಿಸಿಕೊಳ್ಳಲಾಗಿದೆ. ಕಲೈ ಅವರು ಈ ಹಾಡುಗಳಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ.

ಸುಮಾರು ಐವತ್ತು ಜನರ ತಂಡ ಸ್ವಿಜರ್‌ಲ್ಯಾಂಡ್‌ಗೆ ಪಯಣ ಬೆಳೆಸಿತ್ತು. ಈ ಹಾಡುಗಳ ಚಿತ್ರೀಕರಣದೊಂದಿಗೆ ‘ಒಡೆಯ‘ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಡಿಸೆಂಬರ್‌ನಲ್ಲಿ ಚಿತ್ರ ತೆರೆಗೆ ಬರಲಿದೆ.

ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಎನ್.ಸಂದೇಶ್ ಅವರು ನಿರ್ಮಿಸುತ್ತಿರುವ, ಎಂ.ಡಿ.ಶ್ರೀಧರ್ ನಿರ್ದೇಶನದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನವಿದೆ. ಜಯಂತ ಕಾಯ್ಕಿಣಿ, ನಾಗೇಂದ್ರಪ್ರಸಾದ್, ಕವಿರಾಜ್ ಹಾಗೂ ಬಹದ್ದೂರ್ ಚೇತನ್ ಕುಮಾರ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ.

ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ನಾಯಕಿಯಾಗಿ ರಾಘವಿ ತಿಮ್ಮಯ್ಯ ಅಭಿನಯಿಸಿದ್ದಾರೆ. ಇನ್ನುಳಿದಂತೆ ಯಶಸ್ ಸೂರ್ಯ, ಪಂಕಜ್, ನಿರಂಜನ್, ಸಮರ್ಥ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಕೆ.ಕೃಷ್ಣಕುಮಾರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಕಲೈ ನೃತ್ಯ ನಿರ್ದೇಶನ ಹಾಗೂ ವಿಜಯ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದ್ದು ಪ್ರಶಾಂತ್ ರಾಚಪ್ಪ ಸಂಭಾಷಣೆ ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ePatrike ಆ್ಯಪ್‍ ಅನ್ನು ಡೌನ್‍ಲೋಡ್‍ ಮಾಡಿ. ಸುದ್ದಿ ಅಪ್‍ಡೇಟ್ಸ್ ಗಾಗಿ ePathrike facebook ಪುಟ ಲೈಕ್‍ ಮಾಡಿ.
Loading...