odeya teaser ರಾಜ್ಯೋತ್ಸವಕ್ಕೆ ಕಿಚ್ಚು ಹಚ್ಚಲಿದೆ ದರ್ಶನ್ ‘ಒಡೆಯ’ನ ಟೀಸರ್

odeya teaser
odeya poster

odeya teaser ನ.1ರಂದು ಚಾಲೆಂಜಿಂಗ್ ಸ್ಟಾರ್ ದರ್ಶನ್‌ರ ಒಡೆಯ ಟೀಸರ್ ಬಿಟುಗಡೆ

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಖದರ್‍ ಹೆಚ್ಚಿಸಲು ಬರುತ್ತಿದ್ದಾನೆ ಒಡೆಯ. ( odeya teaser) ಹೌದು ಚಾಲೆಂಜಿಂಗ್ ಸ್ಟಾರ್‍ ದರ್ಶನ್ ಅಭಿನಯದ ಬಹು ನಿರೀಕ್ಷಿತ ಒಡೆಯ ಚಿತ್ರ ಮೊದಲ ತುಣುಕು (ಟ್ರೇಲರ್‍) ರಾಜ್ಯೋತ್ಸವದಂದು ಬಿಡುಗಡೆಯಾಗಲಿದೆ.

ಇದನ್ನೂ ಓದಿ: ಶತದಿನದತ್ತ ಸೂಪರ್‌ಹಿಟ್ ದರ್ಶನ್ ಕುರುಕ್ಷೇತ್ರ ದಾಪುಗಾಲು

ಈ ವಿಷಯವನ್ನು ಖುದ್ದು ದರ್ಶನ್ ಅವರೇ ಬಹಿರಂಗಪಡಿಸಿದ್ದಾರೆ. ನಮ್ಮ ‘ಒಡೆಯ’ ಚಿತ್ರದ ಟೀಸರ್ ಇದೇ ನವೆಂಬರ್ 1ರಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ಅಲ್ಲಿ ಬೆಳಗ್ಗೆ 9:55ಕ್ಕೆ ಬಿಡುಗಡೆಯಾಗಲಿದೆ. ನಿಮ್ಮ ಪ್ರೀತಿ-ಪ್ರೋತ್ಸಾಹ- ಆಶೀರ್ವಾದ ಸದಾ ಹೀಗೆ ಇರಲಿ ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ.

ದರ್ಶನ್ ಹಾಗೂ ರಾಘವಿ ತಿಮ್ಮಯ್ಯ ಅಭಿನಯಿಸಿದ ಎರಡು ಹಾಡುಗಳನ್ನು ಸ್ವಿರ್ಲೆಂಡಿನಲ್ಲಿ ಅದ್ದೂರಿಯಾಗಿ ಚಿತ್ರಿಸಿಕೊಳ್ಳುವುದರೊಂದಿಗೆ ಚಿತ್ರ ಚಿತ್ರೀಕರಣ ಪೂಣ‍್ಗೊಂಡಿದ್ದು, ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆ ಮಾಡುವ ಯೋಜನೆ ಚಿತ್ರತಂಡಕ್ಕಿದೆ.

ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಎನ್.ಸಂದೇಶ್ ಅವರು ನಿರ್ಮಿಸುತ್ತಿರುವ, ಎಂ.ಡಿ.ಶ್ರೀಧರ್ ನಿರ್ದೇಶನದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನವಿದೆ. ಜಯಂತ ಕಾಯ್ಕಿಣಿ, ನಾಗೇಂದ್ರಪ್ರಸಾದ್, ಕವಿರಾಜ್ ಹಾಗೂ ಬಹದ್ದೂರ್ ಚೇತನ್ ಕುಮಾರ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ.

ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ನಾಯಕಿಯಾಗಿ ರಾಘವಿ ತಿಮ್ಮಯ್ಯ ಅಭಿನಯಿಸಿದ್ದಾರೆ. ಇನ್ನುಳಿದಂತೆ ಯಶಸ್ ಸೂರ್ಯ, ಪಂಕಜ್, ನಿರಂಜನ್, ಸಮರ್ಥ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ePatrike ಆ್ಯಪ್‍ ಅನ್ನು ಡೌನ್‍ಲೋಡ್‍ ಮಾಡಿ. ಸುದ್ದಿ ಅಪ್‍ಡೇಟ್ಸ್ ಗಾಗಿ ePathrike facebook ಪುಟ ಲೈಕ್‍ ಮಾಡಿ.
Loading...