pejawar seer ಬೆಂಗಳೂರಿನ ವಿದ್ಯಾಪೀಠದಲ್ಲಿ ಪೇಜಾವರ ಶ್ರೀಗಳ ವೃಂದಾವನ, 3 ದಿನ ಶೋಕಾಚರಣೆ

pejawar seer

pejawar seer ಮಧ್ಯಾಹ್ನದ ನಂತರ ಬೆಂಗಳೂರಿನಲ್ಲಿ ಸಾರ್ವಜನಿಕರಿಗೆ ಶ್ರೀಗಳ ಅಂತಿಮ ದರ್ಶನ

ಬೆಂಗಳೂರು: ಭಾನುವಾರ ಬೆಳಗ್ಗೆ ಸ್ವರ್ಗಸ್ಥರಾದ ಪೇಜಾವರ ಮಠಾಧೀಶ ( pejawar seer ) ಶ್ರೀ ವಿಶ್ವೇಶ ತೀರ್ಥ ಸ್ವಾಮಿಜಿ (88) ಅವರ ಅಂತ್ಯಕ್ರಿಯೆ ಅವರ ಇಚ್ಛೆಯಂತೆಯೇ ಬೆಂಗಳೂರಿನ ವಿದ್ಯಾಪೀಢದಲ್ಲಿ ನೆರವೇರಿಸಲಾಗುವುದು. ಅಲ್ಲಿಯೇ ಅವರ ವೃಂದಾವನ ನಿರ್ಮಾಣವಾಗಲಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಶಬರಿಮಲೆ ಅಯ್ಯಪ್ಪನಿಗೆ ಈ ಬಾರಿ ಬಂಪರ್ ಆದಾಯ

ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನದ ಬಳಿಕ ವಿದ್ಯಾಪೀಠದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಈ ಮಧ್ಯೆ ಪೇಜಾವರ ಶ್ರೀಗಳ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆಗೆ ರಾಜ್ಯ ಸರಕಾರ ಆದೇಶಿಸಿದೆ.

ಉಡುಪಿಯ ಅಜ್ಜರಕಾಡಿನಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಬಳಿಕ. ಮಧ್ಯಾಹ್ನ ಹೆಲಿಕಾಪ್ಟರ್ ನಲ್ಲಿ ಬೆಂಗಳೂರಿಗೆ ಕರೆತರಲಾಗುವುದು. ಅಲ್ಲಿ ಬಸವನಗುಡಿ ನ್ಯಾಷನಲ್ ಕಾಲೇಜಿನಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದೆ.

ಕಳೆದೊಂದು ವಾರದಿಂದಲೂ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಗಳು ಭಾನುವಾರ ಪರಂಧಾಮಗೈದರು. ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳನ್ನು ಕಳೆದ 21ರಂದು ಇಲ್ಲಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದಲೂ ವೆಂಟಿಲೇಟರ್ ಮೂಲಕವೇ ಅವರಿಗೆ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು.

ಶ್ರೀಗಳ ನಿಧನ ಭಕ್ತ ಸಾಗರವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ ಸೇರಿ ವಿವಿಧ ರಂಗಗಳ ಗಣ್ಯರು ಶ್ರೀಗಳ ಅಗಲಿಕಗೆ ಕಂಬನಿ ಮಿಡಿದಿದ್ದಾರೆ.

1931ರಲ್ಲಿ ಉಪ್ಪಿನಂಗಡಿಯಲ್ಲಿ ಶಿವಳ್ಳಿ ಬ್ರಾಹ್ಮಣ ದಂಪತಿಗೆ ಹುಟ್ಟಿದ ವೆಂಕಟರಮಣ ತಮ್ಮ ಎಂಟನೇ ವಯಸ್ಸಿನಲ್ಲಿಯೇ ದೀಕ್ಷೆ ಪಡೆದು ವಿಶ್ವೇಶ ತೀರ್ಥರಾದರು. ಪೇಜಾವರ ಮಠಾಧೀಶರಾಗಿ ಅವರು 1952ರಲ್ಲಿ ಅಧಿಕಾರ ವಹಿಸಿಕೊಂಡರು.

ತಾಜಾ ಸುದ್ದಿಗಾಗಿ ePatrike ಆ್ಯಪ್‍ ಅನ್ನು ಡೌನ್‍ಲೋಡ್‍ ಮಾಡಿ. ಸುದ್ದಿ ಅಪ್‍ಡೇಟ್ಸ್ ಗಾಗಿ ePathrike facebook ಪುಟ ಲೈಕ್‍ ಮಾಡಿ.
Loading...