president ಬಿಎಸ್ವೈ ಆಡಿಯೋ: ರಾಷ್ಟ್ರಪತಿಗೆ ಕಾಂಗ್ರೆಸ್ ದೂರು

president
former cm siddaramaiah

president ರಾಷ್ಟ್ರಪತಿ ಅಂಗಳಕ್ಕೆ ಕೊಂಡೊಯ್ಯಲು ಕಾಂಗ್ರೆಸ್ ತೀರ್ಮಾನ

ಬೆಂಗಳೂರು: ಆಪರೇಶನ್ ಕಮಲ ಸಂಬಂಧ ( president ) ಮುಖ್ಯಮಂತ್ರಿ ಯಡಿಯೂರಪ್ಪ ಆಡಿರುವ ಮಾತುಗಳ ಆಡಿಯೋ ಟೇಪ್ ವಿಚಾರವನ್ನು ರಾಷ್ಟ್ರಪತಿಗಳ ಅಂಗಳಕ್ಕೆ ಕೊಂಡೊಯ್ಯಲು ಕಾಂಗ್ರೆಸ್ ಪಕ್ಷವು ತೀರ್ಮಾನಿಸಿದೆ.

ಇದನ್ನೂ ಓದಿ: ಮೈಸೂರಲ್ಲಿ ಡಿಕೆಶಿ ಹವಾ ಬಲು ಜೋರು

ಆಪರೇಷನ್ ಕಮಲ ಸಂಬಂಧದ ಯಡಿಯೂರಪ್ಪ ಆಡಿಯೋ ಕ್ಲಿಪ್ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ನೀಡಲು ನಿರ್ಧರಿಸಿದ್ದೇವೆ ಎಂದು ಪ್ರತಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಪ್ರಕಟಿಸಿದರು.

ಈ ಆಪರೇಷನ್ ಕಮಲದ ಆಡಿಯೋ ಕ್ಲಿಪ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಸಿಎಂ ಯಡಿಯೂರಪ್ಪ ಆಪರೇಶ್ನ್ ಕಮಲದಲ್ಲಿ ಭಾಗಿಯಾಗಿಯಾಗಿರುವುದು ಸ್ಪಷ್ಟವಾಗಿದೆ. ಪಕ್ಷಾಂತರ ಮಾಡಲು ಇವರೇ ಕಾರಣರಾಗಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಮೈತ್ರಿ ಸರ್ಕಾರ ಬೀಳಲು ಇವರಿಬ್ಬರೂ ಕಾರಣರಾಗಿದ್ದಾರೆ. ಶಾಸಕರ ಕುದುರೆ ವ್ಯಾಪಾರ ಮಾಡಿದ್ದಾರೆ, ಸಂವಿಧಾನಕ್ಕೆ ವಿರೋಧವಾಗಿ ವರ್ತಿಸಿದ್ದಾರೆ. ಈ ಸಂಬಂಧ ರಾಷ್ಟ್ರಪತಿಗಳಿಗೆ ಮನವರಿಕೆ ಮಾಡಲಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಸಂವಿಧಾನಿಕ ಹುದ್ದೆಯಲ್ಲಿರುವವರು ಈ ರೀತಿ ಮಾಡಿದರೆ ಹೇಗೆ? ಅವರು ಶಾಸಕರ ಆಯಾ ರಾಂ ಗಯಾರಾಂ ಮಾಡಿಸಿದ್ದಾರೆ. ಇದು ಸಂವಿಧಾನದ 10ನೇ ಶೆಡ್ಯೂಲ್ ನ ಸ್ಪಷ್ಟ ಉಲ್ಲಂಘನೆಯಾಗಿದೆ. ರಾಷ್ಟ್ರಪತಿ ಭೇಟಿಯಾಗಿ ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಲಿದ್ದೇವೆ ಎಂದರು.

ಉಪಚುನಾವಣೆ ನಡೆಯಲಿರುವ ಎಂಟು ಕ್ಷೇತ್ರಗಳಲ್ಲಿ ಟಿಕೆಟ್ ಘೋಷಣೆ‌ ಮಾಡಿದ್ದೇವೆ. ಸುಪ್ರೀಂ ಕೋರ್ಟ್ ತೀರ್ಪು ಬಂದ ಬಳಿಕ ಉಳಿದ ಏಳು ಕ್ಷೇತ್ರಗಳ ಟಿಕೆಟ್ ಅಂತಿಮಗೊಳಿಸಲಿದ್ದೇವೆ‌. ಸುಪ್ರೀಂ ಕೋರ್ಟ್ ತೀರ್ಪಿಗೆ ಕಾಯುತ್ತಿದ್ದೇವೆ‌ ಎಂದು ಸಿದ್ದು ಹೇಳಿದರು.

ತಾಜಾ ಸುದ್ದಿಗಾಗಿ ePatrike ಆ್ಯಪ್‍ ಅನ್ನು ಡೌನ್‍ಲೋಡ್‍ ಮಾಡಿ. ಸುದ್ದಿ ಅಪ್‍ಡೇಟ್ಸ್ ಗಾಗಿ ePathrike facebook ಪುಟ ಲೈಕ್‍ ಮಾಡಿ.
Loading...