rs election ರಾಜ್ಯಸಭಾ ಚುನಾವಣೆ: ಬಿಜೆಪಿಗೆ ವಾಕೋವರ್ ಕೊಟ್ಟ ಕೈ-ದಳ

rs election
ramamurthy

rs election ಬಿಜೆಪಿ ಅಭ್ಯರ್ಥಿ ವಿರುದ್ಧ ಕೈ-ದಳ ಹುರಿಯಾಳಿಲ್ಲ

ಬೆಂಗಳೂರು: ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯಲಿರುವ ( rs election ) ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸದೇ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಬಿಜೆಪಿಗೆ ವಾಕೋವರ್ ನೀಡಿವೆ. ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಸೋಮವಾರ ಕೊನೆಯ ದಿನವಾಗಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ನಿರ್ಭಯರಾಗಿರಿ, ನಾವಿದ್ದೇವೆ: ಮಹಿಳೆಯರಿಗೆ ಕಮಿಷನರ್ ಅಭಯ

ಬಿಜೆಪಿಯಿಂದ ರಾಮಮೂರ್ತಿ ನಾಮಪತ್ರ ಸಲ್ಲಿಸಿದ್ದರೇ ಕಾಂಗ್ರೆಸ್ ಅಥವ ಜೆಡಿಎಸ್‌ನಿಂದ ಯಾರೊಬ್ಬರೂ ನಾಮಪತ್ರ ಸಲ್ಲಿಸಿಲ್ಲ. ಹೀಗಾಗಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿ ಈಗ ಕಮಲ ಅಭ್ಯರ್ಥಿಯಾಗಿರುವ ಕೆಸಿ ರಾಂಮೂರ್ತಿ ಆಯ್ಕೆ ಬಹುತೇಕ ಖಚಿತವಾಗಿದೆ.

ಬಿಜೆಪಿಯಿಂದ ರಾಮಮೂರ್ತಿ ಹೊರತಾಗಿ ಪಕ್ಷೇತರರಾಗಿ ಡಾ.ಕೆ. ಪದ್ಮರಾಜ ಮತ್ತು ಹಿಂದುಸ್ತಾನ್ ಜನತಾ ಪಾರ್ಟಿಯಿಂದ ಶ್ರೀವೆಂಕಟೇಶ್ವರ ಮಹಾಸ್ವಾಮಿ ಎಂಬವರು ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಹೇಳಿದ್ದಾರೆ.

ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು 10 ಮಂದಿ ಅನುಮೋದಕರ ಸಹಿ ಹಾಕುವುದು ಕಡ್ಡಾಯವಾಗಿದೆ. ಇಬ್ಬರು ಸ್ವತಂತ್ರ ಅಭ್ಯರ್ಥಿಗಳಿಗೆ ಯಾರೇ ಅನುಮೋದಕರು ಸಹಿ ಹಾಕಿಲ್ಲ. ಬಿಜೆಪಿ ಅಭ್ಯರ್ಥಿ ಕೆ.ಸಿ.ರಾಮಮೂರ್ತಿಗೆ ಹತ್ತು ಮಂದಿ ಅನುಮೋದಕರು ಸಹಿ ಹಾಕಿದ್ದಾರೆ.

ಮಂಗಳವಾರ ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಸಮರ್ಪಕವಾಗಿರದಿದ್ದರೆ ಅಂತವರ ನಾಮಪತ್ರ ತಿರಸ್ಕರಿಸಲಾಗುತ್ತದೆ. ನಾಮಪತ್ರ ಹಿಂಪಡೆಯಲು ಡಿಸೆಂಬರ್ 5 ಕಡೇ ದಿನವಾಗಿದೆ ಎಂದು ವಿಶಾಲಾಕ್ಷಿ ಹೇಳಿದರು.

ತಾಜಾ ಸುದ್ದಿಗಾಗಿ ePatrike ಆ್ಯಪ್‍ ಅನ್ನು ಡೌನ್‍ಲೋಡ್‍ ಮಾಡಿ. ಸುದ್ದಿ ಅಪ್‍ಡೇಟ್ಸ್ ಗಾಗಿ ePathrike facebook ಪುಟ ಲೈಕ್‍ ಮಾಡಿ.
Loading...