siddu accused ಬಿಜೆಪಿ ಸರಕಾರ ಕೆಡವಲು ಸಿದ್ದು ಕಾದು ಕುಳಿತಿದ್ದಾರಂತೆ!

siddu accused
former cm hd kumaraswamy and clp leader siddaramaiah

siddu accused ಮಾಜಿ ಸಿಎಂ ಕುಮಾರಸ್ವಾಮಿ ಪರೋಕ್ಷ ಆರೋಪ

ಬೆಂಗಳೂರು: ಯಡಿಯೂರಪ್ಪ ಅವರ ಸರಕಾರವನ್ನು ( siddu accused ) ಕೆಡವಲು ಕೆಲವರು ತುದಿಗಾಲ ಮೇಲೆ ನೀಮತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೆಸರು ಹೇಳದೇ ಪರೋಕ್ಷವಾಗಿ ಸಿದ್ದರಾಮಯ್ಯ ಅವರತ್ತ ಬೊಟ್ಟು ಮಾಡಿದ್ದಾರೆ.

ಇದನ್ನೂ ಓದಿ: ಆಪರೇಶನ್ ಕಮಲ ಸೂತ್ರದಾರಿ ಯಡಿಯೂರಪ್ಪ ಅಂದ್ರು ಗೌಡ್ರು

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅವರು ಬಿಎಸ್ವೈ ಸರಕಾರ ಉರುಳಿಸಲು ಕಾದು ಕುಳಿತಿದ್ದಾರೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಅವರ ಮೇಲೆ ಆರೋಪ ಮಾಡಿದ್ದಾರೆ.

ಕೆಲವರು ತಾವು ಮುಖ್ಯಮಂತ್ರಿ ಆಗಲೇಬೇಕು ಎಂಬ ಸ್ವಾರ್ಥದ ದುರಾಸೆಯಿಂದ ಜನರ ಹಣ ಪೋಲಾದರೂ ಪರವಾಗಿಲ್ಲ ಎಂದು ಸರ್ಕಾರ ಬೀಳಿಸಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಪಕ್ಷ ಬಿಟ್ಟು ಹೋದ ಶಾಸಕರಲ್ಲಿ ಬಹುತೇಕರು ನಿಮ್ಮ ಪಕ್ಷದವರೇ ಎಂಬುದನ್ನು ಮರೆಯಬಾರದು. ಪಕ್ಕದ ಮನೆಯ ಒಲೆ ಆರಿಸಲು ಬರುವ ಮುನ್ನ ಹೊತ್ತಿ ಉರಿಯುತ್ತಿರುವ ತಮ್ಮ ಮನೆಯ ಬೆಂಕಿ ನಂದಿಸಿಕೊಳ್ಳಿ ಎಂದು ಕುಮಾರಸ್ವಾಮಿ ಅವರು ಸಿದ್ದರಾಮಯ್ಯನವರಿಗೆ ಸಲಹೆ ನೀಡಿದ್ದಾರೆ.

ತೀರಾ ಇತ್ತೀಚೆಗಷ್ಟೇ ಯಾವುದೇ ಕಾರಣಕ್ಕೂ ಬಿಎಸ್ವೈ ಸರಕಾರ ಬೀಳಲು ಅವಕಾಶ ನೀಡುವುದಿಲ್ಲ ಎಂದು ಖುದ್ದು ಕುಮಾರಸ್ವಾಮಿ ಅವರೇ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು. ಅದಕ್ಕೂ ಮುನ್ನ ಉಪ ಚುನಾವಣೆ ನಂತರ ಯಡಿಯೂರಪ್ಪ ಸರಕಾರ ಅಧಿಕಾರದಲ್ಲಿರುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು.

ತಾಜಾ ಸುದ್ದಿಗಾಗಿ ePatrike ಆ್ಯಪ್‍ ಅನ್ನು ಡೌನ್‍ಲೋಡ್‍ ಮಾಡಿ. ಸುದ್ದಿ ಅಪ್‍ಡೇಟ್ಸ್ ಗಾಗಿ ePathrike facebook ಪುಟ ಲೈಕ್‍ ಮಾಡಿ.
Loading...