siddu chants ಮೂಲ-ವಲಸಿಗ ಎಂಬ ಕಚ್ಚಾಟ ನಿಲ್ಲದಿದ್ದರೇ ಕಾಂಗ್ರೆಸಿಗೆ ರಾಜ್ಯದಲ್ಲಿ ಉಳಿಗಾಲಿಲ್ಲ: ಸಿದ್ದು

siddu chants
former cm siddaramaiah

siddu chants ನಾಯಕರಲ್ಲಿ ಒಗ್ಗಟ್ಟು ಮೂಡದಿದ್ದರೇ ಕಾಂಗ್ರೆಸ್ ಬಲವರ್ಧನೆ ಕಷ್ಟ ಎಂದ ಸಿದ್ದರಾಮಯ್ಯ

ಹೊಸದಿಲ್ಲಿ: ಎರಡು ದಿನಗಳ ಕಾಳ ಹೈಕಮಾಂಡ್ ಮಟ್ಟದಲ್ಲಿ ರಾಜ್ಯ (siddu chants) ಕಾಂಗ್ರೆಸ್ ಕುರಿತು ಮಹತ್ವದ ಚರ್ಚೆ ನಡೆಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಾಯಕರಲ್ಲಿ ಒಗ್ಗಟ್ಟಿನ ಕೊರತೆ ಎದ್ದು ಕಾಣುತ್ತಿದ್ದು, ಪರಿಸ್ಥಿತಿ ಸುಧಾರಿಸದಿದ್ದರೇ ರಾಜ್ಯದಲ್ಲಿ ಪಕ್ಷದ ಬಲವರ್ಧನೆ ಕಷ್ಟಸಾಧ್ಯ ಎಂದು ತಿಳಿಹೇಳಿದ್ದಾರೆ.

ಇದನ್ನೂ ಓದಿ:ಕೆಪಿಸಿಸಿ ಅಧ್ಯಕ್ಷತೆ: ಆತುರ ಬೇಡಂದ ಸಿದ್ದು, ಗೊಂದಲದಲ್ಲಿ ಹೈಕಮಾಂಡ್

ರಾಜ್ಯ ಕಾಂಗ್ರೆಸಿನಲ್ಲು ಮೂಲ ವಲಸಿಗ ೆಂಬ ಕಚ್ಚಾಟ ಅವ್ಯಾಹತವಾಗಿ ಮುಂದುವರಿದಿದೆ. ದಶಕವೇ ಕಳೆದಿದ್ದರೂ ಇನ್ನೂ ತಮ್ಮನ್ನು ಹೊರಗಿನವರಂತೆಯೇ ಕಾಣಲಾಗುತ್ತಿದೆ ಎಂದು ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ವರಿಷ್ಠರ ಮುಂದೆ ಬೇಸರ ತೋಡಿಕೊಂಡರು ಎಂದು ಮೂಲಗಳು ತಿಳಿಸಿವೆ.

ಕೆಪಿಸಿಸಿ ಅಧ್ಯಕ್ಷತೆ ಕುರಿತಾಗಿ ಮಂಗಳವಾರ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆ ಚರ್ಚೆ ನಡೆಸಿದ್ದ ಸಿದ್ದರಾಮಯ್ಯ ಬುಧವಾರವೂ ದಿಲ್ಲಿ ವಾಸ ಮುಂದುವರಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಂಗಡವೂ ಸುದೀರ್ಘ ಸಮಾಲೋಚನೆ ಮಾಡಿದರು. ದಿನೇಶ್ ಗುಂಡೂರಾವ್ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಲಿಂಗಾಯತರ ಮುಖಂಡರನ್ನು ನೇಮಿಸುವಂತೆ ಅವರು ಸಲಹೆ ನೀಡಿದ್ದಾರೆ.

ಸಿದ್ದರಾಮಯ್ಯ ಅವರ ೀ ಸಲಹೆಯಿಂದಾಗಿ ರೇಸಿನಲ್ಲಿ ಮುಂಚೂಣಿಯಲ್ಲಿದ್ದ ಡಿಕೆ ಶಿವಕುಮಾರ್ ಅವರಿಗೆ ಹಿನ್ನಡೆ ಆಗಬಹುದು ಎಂದು ಹೇಳಲಾಗಿದೆಯಾದರೂ ಈಗಲೂ ಅವರೇ ಹೈಕಾಮಾಂಡಿನ ಮೊದಲ ಆಯ್ಕೆಯಾಗಿದ್ದಾರೆ ಎಂದೂ ಮೂಲಗಳು ಹೇಳುತ್ತಿವೆ.

ತಾಜಾ ಸುದ್ದಿಗಾಗಿ ePatrike ಆ್ಯಪ್‍ ಅನ್ನು ಡೌನ್‍ಲೋಡ್‍ ಮಾಡಿ. ಸುದ್ದಿ ಅಪ್‍ಡೇಟ್ಸ್ ಗಾಗಿ ePathrike facebook ಪುಟ ಲೈಕ್‍ ಮಾಡಿ.
Loading...