siddu demands ಕೇಂದ್ರದ ಪರಿಹಾರ ದಾನವೂ ಅಲ್ಲ, ಭಿಕ್ಷೆಯೂ ಅಲ್ಲ. ಅದು ನಮ್ಮ ಹಕ್ಕು: ಸಿದ್ದರಾಮಯ್ಯ

siddu demands
former cm siddaramaiah

siddu demands ರಾಜ್ಯದ ಪ್ರವಾಹಕ್ಕೆ ಸ್ಪಂದಿಸದ ಕೇಂದ್ರ: ಮಾಜಿ ಸಿಎಂ ಕೆಂಡಾಮಂಡಲ

ಬೆಂಗಳೂರು: ರಾಜ್ಯ ಸಂಕಷ್ಟ ಪರಿಸ್ಥಿತಿಯಲ್ಲಿರುವಾಗ ( siddu demands ) ತುರ್ತಾಗಿ ನೆರವು ನೀಡಬೇಕಾದ್ದು ಖೇಂದ್ರ ಸರಕಾರದ ಆದ್ಯ ಕರ್ತವ್ಯ. ಈ ವಿಚಾರದಲ್ಲಿ ಕೇಂದ್ರ ತಾರತಮ್ಯ ತೋರಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ಇದನ್ನೂ ಓದಿ: ವರುಣನ ಕುಹಕ, ಅರ್ಧ ಮುಳುಗಿದ ಕರ್ನಾಟಕ

ತೀವ್ರ ನೆರೆ ಹಾವಳಿಯಿಂದ ತತ್ತರಿಸಿರುವ ಕರ್ನಾಟಕ ಪದೇಪದೆ ಕೇಳಿದರೂ ಕೇಂದ್ರ ಸರಕಾರ ಸೂಕ್ತ ಪರಿಹಾರ ನೀಡುತ್ತಿಲ್ಲ. ಈಗ ನೀಡಿರುವ ಪರಿಹಾರ ಏನೇನೂ ಅಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪರಿಹಾರ ಕೊಡಿ ಕೊಡಿ ಎಂದು ಕೇಂದ್ರ ಸರ್ಕಾರವನ್ನು ಕೇಳಿಕೊಳ್ಳಲು ನಾವೇನೂ ಭಿಕ್ಷುಕರಲ್ಲ. ಅಥವಾ ಕೇಂದ್ರ ಸರ್ಕಾರ ನಮಗೆ ದಾನವನ್ನೇನೂ ಕೊಡುತ್ತಿಲ್ಲ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಪರಿಹಾರ ಏನೇನೂ ಅಲ್ಲ.

ಜೊತೆಗೆ ರಾಜ್ಯದ ವಿಚಾರದಲ್ಲಿ ಅದರಲ್ಲಿಯೂ ಇಂಥಹ ಕೆಟ್ಟ ಪರಿಸ್ಥಿತಿಯಲ್ಲಿ ಮಲತಾಯಿ ಧೋರಣೆ ಸಲ್ಲದು. ಇದನ್ನು ಯಾರೂ ಮೆಚ್ಚುವುದಿಲ್ಲ. ರಾಜ್ಯದ ಜನತೆ ಮಾಡಿರುವ ಅನ್ಯಾಯವಾದರೂ ಏನು ? 26 ಸಂಸದರನ್ನು ಬಿಜೆಪಿಯಿಂದ ಆಯ್ಕೆ ಮಾಡಿ ಕಳುಹಿಸಿದ್ದು ತಪ್ಪೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪ್ರಸ್ತುತ ಈಗ ಸುರಿದಿರುವ ಮಳೆಯಿಂದ ಸುಮಾರು ಒಂದು ಲಕ್ಷ ಕೋಟಿಗೂ ಹೆಚ್ಚು ನಷ್ಟ ಸಂಭವಿಸಿದೆ. ಸಾವಿರಾರು ಎಕರೆ ಬೆಳೆ ನಷ್ಟವಾಗಿದೆ. ಸೇತುವೆಗಳು, ಮನೆಗಳು ಕುಸಿದಿವೆ. ಸರ್ಕಾರದ ಅಂಕಿ ಅಂಶಗಳ ಪ್ರಕಾರ 25ರಿಂದ 30 ಮಂದಿ ಸಾವನ್ನಪ್ಪಿದ್ದಾರೆ. ಇಂತಹ ಪ್ರವಾಹವನ್ನು ಹಿಂದೆಂದೂ ಕಂಡಿರಲಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ePatrike ಆ್ಯಪ್‍ ಅನ್ನು ಡೌನ್‍ಲೋಡ್‍ ಮಾಡಿ. ಸುದ್ದಿ ಅಪ್‍ಡೇಟ್ಸ್ ಗಾಗಿ ePathrike facebook ಪುಟ ಲೈಕ್‍ ಮಾಡಿ.
Loading...